ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗ್ತಾ ಇದೆ. ಇಂದು ಒಂದು ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 1,108 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ರೇಟ್ 0.66% ಗೆ ಇಳಿಕೆಯಾಗಿದೆ. 100 ಜನರಿಗೆ ಟೆಸ್ಟ್ ಮಾಡಿದ್ರೆ ಒಬ್ಬರಲ್ಲಿ ಮಾತ್ರ ಪಾಸಿಟಿವ್ ಕಂಡುಬರುತ್ತದೆ.ಬೆಂಗಳೂರಿನಲ್ಲಿ ಕೂಡ ಪ್ರಕರಣ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 308 ಕೇಸ್ ದಾಖಲಾಗಿದ್ದು, ಕೊರೋನಾಗೆ 05 ಮಂದಿ ಸಾವನ್ನಪ್ಪಿದ್ದಾರೆ. ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಸಾವಿನ ಪ್ರಕರಣ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 809 ಜನ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 203 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ.ಇಂದು ರಾಜ್ಯದಲ್ಲಿ ಆ್ಯಕ್ಟೀವ್ ಕೇಸ್‍ಗಳ ಸಂಖ್ಯೆ 16,174ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಕೋವಿಡ್ ಟೆಸ್ಟ್ ಕೂಡ ಒಂದು ಲಕ್ಷಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ಆಗಿದೆ. 16,6006 ಕೋವಿಡ್ ಟೆಸ್ಟ್ ಆಗಿದ್ದು, 1,108 ಪಾಸಿಟಿವ್ ಆಗಿರೋದು ಕೊರೊನಾ ಕಂಟ್ರೋಲ್ ನಲ್ಲಿ ಇರೋದು ಗೊತ್ತಾಗುತ್ತಿದೆ. ಇದನ್ನೂ ಓದಿ: ಮೂರೂವರೆ ತಿಂಗಳ ಬಳಿಕ ಕೊರೊನಾ ಗೆದ್ದ ವೈದ್ಯ- ಡಾಕ್ಟರ್ ಕಣ್ಣೀರ ಕಥೆ ಓದಿಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಹಾವೇರಿ 0, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಯಚೂರು 0, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.ಇಂದಿನ 16/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/0MrPdxhf0A @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/A4CZV8S2gk— K'taka Health Dept (@DHFWKA) September 16, 2021Sign in to your account
Username or Email Address


Password

 Remember Me


