ರಾಯಚೂರು: ಡೆಂಘೀ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.ಮಾನವಿ ಪಟ್ಟಣದ ಮಂಜುನಾಥ ಅವರ ಮಗು ಸಾವನ್ನಪ್ಪಿದೆ. ಜ್ವರದಿಂದ ಬಳಲುತ್ತಿದ್ದ ಮಗುವನ್ನು ತಪಾಸಣೆ ಮಾಡಿದಾಗ ಡೆಂಘೀ ಜ್ವರ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮಗು ಸಾವನ್ನಪ್ಪಿದ್ದು, ಡೆಂಘೀ ಜ್ವರದಿಂದ ಮೃತಪಟ್ಟಿದೆ ಎಂದು ದೃಢಪಟ್ಟಿದೆ. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿಮಗುವನ್ನು ಕಳೆದುಕೊಂಡ ಪೋಷಕರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದ ಬಳಿಕ ಮೃತ ಮಗುವಿನ ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಆದರೆ ಕಂದಮ್ಮ ಬಲಿಯಾಗಿರುವುದು ಕುಟುಂಬಸ್ಥರಲ್ಲಿ ತೀವ್ರ ದುಃಖ ಮನೆ ಮಾಡಿದೆ.Sign in to your account
Username or Email Address


Password

 Remember Me


