ಉಡುಪಿ: ಅಂಗಾಂಗಗಳನ್ನು ದಾನ ಮಾಡಿ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾರೆ.ಉಡುಪಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ತುಳುಕೂಟ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆಶಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಂಗಳವಾರ ಸಂಜೆ ಉಡುಪಿಯ ಕುಕ್ಕಿಕಟ್ಟೆಯಲ್ಲಿರುವ ತಮ್ಮ ಮನೆಯಲ್ಲಿ ಆಶಾ ಶೆಟ್ಟಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಮರಣ ಪತ್ರವನ್ನು ಬರೆದಿಟ್ಟಿದ್ದು, ತನ್ನ ಕಣ್ಣು ಸೇರಿದಂತೆ ಅಂಗಾಂಗಗಳನ್ನು ದಾನ ಮಾಡಿ ಇದು ನನ್ನ ಆಸೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮನೆಯನ್ನು ಕೆಡವಿದ್ದಾರೆ ನ್ಯಾಯ ನೀಡಿ- ದೇವರ ಫೋಟೋ ಹಿಡಿದು ಕಣ್ಣೀರಿಟ್ಟ ವೃದ್ಧದೇಹವನ್ನು ಉಡುಪಿ ನಗರ ಪೊಲೀಸರು ಮತ್ತು ಸಮಾಜ ಸೇವಕರು ಕುಟುಂಬಸ್ಥರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. ಅಲ್ಲೇ ಮರಣೋತ್ತರ ಪರೀಕ್ಷೆಗಳನ್ನು ನಡೆಸುವುದು ಎಂದು ನಿರ್ಧರಿಸಲಾಗಿತ್ತು. ಮೃತಪಟ್ಟವರ ಕೊನೆಯ ಆಸೆಯನ್ನು ಈಡೇರಿಸಬೇಕು ಎಂದು ಕುಟುಂಬಸ್ಥರು ಚರ್ಚೆ ಮಾಡಿ ಆಶಾ ಶೆಟ್ಟಿ ಅವರ ಮೃತದೇಹವನ್ನು ಮಣಿಪಾಲ ಕೆಎಂಸಿಗೆ ರವಾನೆ ಮಾಡಲಾಯ್ತು. ಮೃತಪಟ್ಟು ಮೂರು ಗಂಟೆಯ ಒಳಗೆ ಪ್ರಕ್ರಿಯೆಗಳೆಲ್ಲ ನಡೆದಿರುವುದರಿಂದ ಕಣ್ಣುಗಳು ದಾನಕ್ಕೆ ಯೋಗ್ಯವಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಫ್ಲೈಓವರ್ ಮೇಲಿಂದ ಬಿದ್ದು ಅಪಘಾತವಾದ ಸ್ಥಳದಲ್ಲೇ ಮತ್ತೊಂದು ಅಪಘಾತತನ್ನ ಮಗನ ಸಾವಿನ ನಂತರ ಮಾನಸಿಕವಾಗಿ ಆಶಾ ಶೆಟ್ಟಿ ಸಾಕಷ್ಟು ಕುಗ್ಗಿದ್ದರು ಎನ್ನಲಾಗಿದೆ. ಮಗಳಿಗೆ ಮದುವೆಯಾಗಿದ್ದು, ಆತ್ಮಹತ್ಯೆಗೂ ಮೊದಲು ಕರೆ ಮಾಡಿ ಚೆನ್ನಾಗಿ ಮಾತನಾಡಿದ್ದರು ಎಂಬ ಮಾಹಿತಿಯಿದೆ. ಈಗ ಮೃತ ದೇಹವನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ಕಾರ್ಯಕ್ರಮಗಳಲ್ಲಿ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದರು. ಪಕ್ಷದ ಚಟುವಟಿಕೆಗಿಂತ ಜಾಸ್ತಿ ರಾಷ್ಟ್ರೀಯ ಹಬ್ಬ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಭಜನೆ ತಂಡದಲ್ಲಿ ಸಕ್ರೀಯರಾಗಿದ್ದರು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತಸರ್ಕಾರದ ಅನುದಾನ, ಸಹಾಯಗಳನ್ನು ಜನಪ್ರತಿನಿಧಿಗಳ ಬಳಿ ತೆರಳಿ ಕೊಡಿಸಲು ಬಹಳ ಕಾಳಜಿ ಹೊಂದಿದ್ದರು ಎಂದು ಸ್ಥಳೀಯ ಜನಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತ ಶರೀರವನ್ನು ಜಿಲ್ಲಾಸ್ಪತ್ರೆ, ಕೆಎಂಸಿಗೆ ರವಾನೆ ಮಾಡಿದ್ದರು. ಇಂದು ಅಂತ್ಯ ಸಂಸ್ಕಾರ ವಿಧಿ ನಡೆಯಲಿದೆ.Sign in to your account
Username or Email Address


Password

 Remember Me


