ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಕಾರು ಸಹ ಜಕಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದೆ. ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು. ಸದ್ಯ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


