ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ (Dr.Yathindra Siddaramaiah) ಎಂಎಲ್‍ಸಿ ಟಿಕೆಟ್ ಸಿಗೋದು ಫಿಕ್ಸ್ ಆಗಿದೆ. ಈ ವಿಚಾರವನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಯತೀಂದ್ರ ಅವರು ಟಿ ನರಸೀಪುರಕ್ಕೆ ಆಗಮಿಸಿದ್ದರು. ಈ ವೇಳೆ ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿಕೊಂಡರು.ಈ ವೇಳೆ ನಾನು ಎಂಎಲ್ ಸಿ ಆಗಿ ಶಾಸಕನಾಗ್ತೀನಿ. ಶಾಸಕರ ಅನುದಾನದಲ್ಲಿ ಹಣ ಹಾಕುತ್ತೇನೆ. ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರೋ ಕಾರಣ ಅವರ ಬಳಿ ಮಾತನಾಡಿ ಅವರಿಂದಲೂ ಅನುದಾನ ಕೊಡಿಸ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಮೂಲಕ ಯತೀಂದ್ರ ತಾವು ಎಂಎಲ್ ಸಿ ಆಗೋದರ ಬಗ್ಗೆ ಸುಳಿವು ನೀಡಿದರು. ಇದನ್ನೂ ಓದಿ: ಶನಿವಾರ 57 ಸ್ಥಾನಗಳಿಗೆ ಕೊನೇ ಹಂತದ ಚುನಾವಣೆ – ಕಣದಲ್ಲಿರುವ ಘಟಾನುಘಟಿಗಳು ಯಾರು?Sign in to your account
Username or Email Address


Password

 Remember Me


