ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ (KR Nagara Victim Kidnap Case) ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಐಪಿಸಿ ಸೆಕ್ಷನ್‌ 120 ಬಿ (ಕ್ರಿಮಿನಲ್‌ ಪಿತೂರಿ) ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದನ್ನೂ ಓದಿ: ನನಗೆ ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆ: ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು ಪ್ರಕರಣ ಬೆಳಕಿಗೆ ಬಂದಾಗಿನಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಜೈಲಿನಿಂದ ರಿಲೀಸ್ ಆದ ಪತಿ ರೇವಣ್ಣ ಅವರನ್ನು ಭೇಟಿ ಆಗಿಲ್ಲ. ಸದ್ಯ ಅಜ್ಞಾತವಾಸಿಯಾಗಿರುವ ಭವಾನಿ ರೇವಣ್ಣಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದ್ದು, ನಾಳೆ ತನಿಖೆ ಎದುರಿಸುವಂತೆ ಸೂಚಿಸಿದೆ.ಮೇ 15ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಆದರೆ ಈವರೆಗೂ ನೋಟಿಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮ ವಿಚಾರಣೆಯ ಅವಶ್ಯಕತೆ ಇದೆ. ಹೀಗಾಗಿ ಜೂನ್ 1ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆ ಒಳಗೆ ಮಹಿಳಾ ಅಧಿಕಾರಿಗಳೊಂದಿಗೆ ನಿಮ್ಮ ಮನೆಗೆ ಬರುತ್ತೇವೆ. ಈ ವೇಳೆ ನೀವು ಮನೆಯಲ್ಲಿ ಖುದ್ದು ಹಾಜರು ಇರಬೇಕು ಎಂದು ಎಸ್‌ಐಟಿ ತನಿಖಾಧಿಕಾರಿ ಹೇಮಂತ್‌ಕುಮಾರ್ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.Sign in to your account
Username or Email Address


Password

 Remember Me


