ಬೆಂಗಳೂರು: ಸದ್ಯ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಇಂದು ರಾಜ್ಯದಲ್ಲಿ 673 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದೆ. ಅಲ್ಲದೆ 13 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 18,404 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಒಟ್ಟು 1,074 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 1,19,014 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.56 ಮತ್ತು ಮರಣ ಪ್ರಮಾಣ ಶೇ.1.93 ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 29,62,408 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 37,517ಕ್ಕೆ ಏರಿಕೆಯಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ 214 ಜನರಿಗೆ ಸೋಂಕು ತಗುಲಿದ್ರೆ 371 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 7,211 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಹಾಮಾರಿ ಬೆಂಗಳೂರಿನಲ್ಲಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು ನಂತರ ದಕ್ಷಿಣ ಕನ್ನಡದಲ್ಲಿ ಮಾತ್ರ 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 214, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 115, ದಾವಣಗೆರೆ 3, ಧಾರವಾಡ 0, ಗದಗ 0, ಹಾಸನ 51, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 6, ಕೊಪ್ಪಳ 1, ಮಂಡ್ಯ 4, ಮೈಸೂರು 39, ರಾಯಚೂರು 0, ರಾಮನಗರ 2, ಶಿವಮೊಗ್ಗ 21, ತುಮಕೂರು 36, ಉಡುಪಿ 75, ಉತ್ತರ ಕನ್ನಡ 17, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.ಇಂದಿನ 13/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/MX38tVrCXf @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dbjtuYs8YY— K'taka Health Dept (@DHFWKA) September 13, 2021Sign in to your account
Username or Email Address


Password

 Remember Me


