ಚಿಕ್ಕಬಳ್ಳಾಪುರ: ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿಯ ಹಳೆ ಊರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಲಿಖಿತ್(14) ಹಾಗೂ ಹರಿ ಚರಣ್(13) ಮೃತರು. ಮೃತ ಬಾಲಕರು ನಿನ್ನೆ ಮಧ್ಯಾಹ್ನ 3 ಗಂಟೆ ವೇಳೆ ಈಜಾಡಲು ಗ್ರಾಮದ ಹೊರವಲಯದ ಜಯಣ್ಣ ಎಂಬುವವರಿಗೆ ಸೇರಿದ ಕೃಷಿಹೊಂಡದ ಬಳಿ ತೆರಳಿದ್ದಾರೆ. ಆದರೆ ಇಬ್ಬರು ಬಾಲಕರಿಗೂ ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ನಿರಾಶ್ರಿತರೊಂದಿಗೆ ಕುಣಿದು ಕುಪ್ಪಳಿಸಿದ ತಹಶೀಲ್ದಾರ್ಸಂಜೆಯಾದರೂ ಬಾಲಕರು ಮನೆಗೆ ಬಾರದ ಕಾರಣ ಪೋಷಕರು ಹುಡುಕಾಡಿದಾಗ ಕೃಷಿಹೊಂಡದಲ್ಲಿ ಬಾಲಕರ ಮೃತ ದೇಹಗಳು ಪತ್ತೆಯಾಗಿದೆ. ಇನ್ನೂ ಗ್ರಾಮಸ್ಥರೇ ಮೃತದೇಹಗಳನ್ನು ಹೊರತೆಗೆದು ಮೃತರ ಮನೆ ಬಳಿ ತೆಗೆದುಕೊಂಡು ಹೋಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ:  ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟವಿಷಯ ತಿಳಿದ ಗೌರಿಬಿದನೂರು ಸಿಪಿಐ ಶಶಿಧರ್ ಹಾಗೂ ಗ್ರಾಮಾಂತರ ಠಾಣಾ ಪಿಎಸ್‍ಐ ವಿಜಯ್ ಮೃತ ಕುಟುಂಬಸ್ಥರ ಮನವೊಲಿಸಿ ಮೃತದೇಹಗಳನ್ನು ತಡರಾತ್ರಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆ ಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ನಂತರ ಮರಣೋತ್ತರ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ:  ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್ಇಬ್ಬರು ಬಾಲಕರು ಅಕ್ಕಪಕ್ಕದ ಮನೆಯವರಾಗಿದ್ದು, ಸ್ನೇಹಿತರಾಗಿದ್ದರು. ಸಾವಿನಲ್ಲೂ ಸಹ ಇಬ್ಬರು ಒಂದಾಗಿ ಜೀವ ಬಿಟ್ಟಿದ್ದಾರೆ. ಸದ್ಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


