ಚಿಕ್ಕೋಡಿ: ಮಕ್ಕಳ ಮೊದಲ ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ಮೂಲಸೌಕರ್ಯಗಳ ವ್ಯವಸ್ಥೆ ಮಾಡಿ, ಅನುಕೂಲ ಕಲ್ಪಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಲಖನಾಪುರ ಗ್ರಾಮದಲ್ಲಿ, ನಬಾರ್ಡ್ ಆರ್‍ಐಡಿಎಫ್-25 ಯೋಜನೆಯಡಿ 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮದ ಪುಟಾಣಿಗಳ ಏಳಿಗೆಗಾಗಿ ಈ ಕೇಂದ್ರ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..! ಅಷ್ಟೆ ಅಲ್ಲದೇ ಕ್ಷೇತ್ರದ ಅಂಗನವಾಡಿ ಕೇಂದ್ರಗಳ ಸವಾರ್ಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ:  ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರSign in to your account
Username or Email Address


Password

 Remember Me


