ದಾವಣಗೆರೆ: ನಿನ್ನೆ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕ ಶವವಾಗಿ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆ ನಗರದ ಟಿವಿ ಸ್ಟೇಷನ್ ಕೆರೆಯಲ್ಲಿ ನಡೆದಿದೆ.7 ವರ್ಷದ ಗಣ್ಯ ಮೃತ ಬಾಲಕ. ನಗರದ ಚಿಕ್ಕಮ್ಮಣಿ ದೇವರಾಜ್ ಅರಸು ಬಡವಾಣೆಯಯ ನಿವಾಸಿ ಗಣ್ಯ, ನಿನ್ನೆ ಮಧ್ಯಾಹ್ನ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಪಕ್ಕದ ಕೆರೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.  ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಬೀದಿ ಶ್ವಾನಗಳ ಹಾವಳಿ – ರೋಗಿಗಳಲ್ಲಿ ಆತಂಕಬುದ್ಧಿಮಾಂದ್ಯ ಬಾಲಕನಾಗಿದ್ದ ಗಣ್ಯ, ತಮ್ಮ ದೊಡ್ಡಮ್ಮನ ಮನೆಯಿಂದ ತಿರುಗಾಡುತ್ತಾ ಕೆರೆಗೆ ಬಂದು ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕೆರೆಗೆ ಕಾಂಪೌಂಡ್ ಕಟ್ಟದ ಹಿನ್ನೆಲೆ ಬಾಲಕ ನೀರಿಗೆ ಬಿದ್ದು ಮೃತನಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ:ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಬೇಕು: ಜೊಲ್ಲೆಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬಾಲಕನ ಮೃತ ದೇಹವನ್ನು ಹೊರತೆಗೆದಿದ್ದಾರೆ. ಇನ್ನೂ ಸ್ಥಳಕ್ಕೆ ಮೇಯರ್ ಹಾಗೂ ಆಯುಕ್ತರು ಬರುವಂತೆ ಜನರು ಆಗ್ರಹಿಸಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


