ಚಿಕ್ಕೋಡಿ/ಬೆಳಗಾವಿ: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ನಡೆದಿದೆ.ವಿನಾಯಕ ಚಿದಾನಂದ ಕಾವೇರಿ (22) ಮುತ್ತು ಮಾಳಿ (22) ಮೃತ ಯುವಕರು. ಈರಯ್ಯ ಹಿರೇಮಠ (22) ಸ್ಥಿತಿ ಗಂಭೀರವಾಗಿದ್ದು, ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳಾಗಿದ್ದು, ಈರಯ್ಯ ಅವರ ತಾಯಿಯನ್ನು ಧಾರವಾಡಕ್ಕೆ ಬಿಟ್ಟು ಬರುವಾಗ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಫಸಲಿಗೆ ಬಂದಿದ್ದ 700 ಅಡಿಕೆ ಮರ ಕಡಿದು ಹಾಕಿದ ದುಷ್ಕರ್ಮಿಗಳುಧಾರವಾಡದಿಂದ ಅಥಣಿಗೆ ಆಗಮಿಸುವಾಗ ರಸ್ತೆ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಭಾನುವಾರ ನಸುಕಿನ ವೇಳೆ ಗುರ್ಲಾಪೂರ ಬಳಿ ಕಾರ್ ಅಪಘಾತ ಸಂಭವಿಸಿದ್ದು, ಹಾರೋಗೇರಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೋಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


