ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1,074 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 04 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಪಾಸಿಟಿವಿಟಿ ರೇಟ್ 0.63%ಕ್ಕೆ ಇಳಿಕೆಯಾಗಿದೆ.ಇಂದು 1,136 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 16,998 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,58,164 ಜನರಿಗೆ ಸೋಂಕು ತಗುಲಿದೆ. 29,04,683 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.63ಕ್ಕೆ ಇಳಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.37ರಷ್ಟಿದೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯಒಟ್ಟು 3,07,11,505 ಸ್ಯಾಂಪಲ್ (ಆರ್‍ಟಿ ಪಿಸಿಆರ್ 2,60,60572+ 46,50933 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಭಾಷೆ, ಸಂಸ್ಕೃತಿಯಿಂದಲೇ ಸಮುದಾಯಗಳು ತಮ್ಮ ಅಸ್ಮಿತೆಯನ್ನು ಗುರುತಿಸಿಕೊಳ್ಳುವುದು: ಟಿ.ಎಸ್.ನಾಗಾಭರಣಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 5, ಬೆಳಗಾವಿ 08, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ 343, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 68, ಚಿತ್ರದುರ್ಗ 8, ದಕ್ಷಿಣ ಕನ್ನಡ 176, ದಾವಣಗೆರೆ 3, ಧಾರವಾಡ 7, ಹಾಸನ 81, ಕಲಬುರಗಿ 7, ಕೊಡಗು 59, ಕೋಲಾರ 12, ಮಂಡ್ಯ 20, ಮೈಸೂರು 15, ರಾಯಚೂರು 6, ರಾಮನಗರ 2, ಶಿವಮೊಗ್ಗ 39, ತುಮಕೂರು 22, ಉಡುಪಿ 126, ಉತ್ತರ ಕನ್ನಡ 25, ವಿಜಯಪುರದಲ್ಲಿ 1 ಮತ್ತು ಯಾದಗಿರಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ:  ಫುಲ್ ಒಳ್ಳೆ ಹುಡುಗನ ರೀತಿ ಡವ್ ಎಂದ ಬ್ರೊ ಗೌಡಬೆಂಗಳೂರಿನಲ್ಲಿ ಕೂಡ ಇಂದು 343 ಕೇಸ್ ದಾಖಲಾಗಿದ್ದು, ಕಳೆದ ಮೂರು ದಿನಗಳಿಂದ ಕೇಸ್ 300ರ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾಗೆ 03 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಬಹಳ ದಿನಗಳ ನಂತರ ಸ್ವಲ್ಪ ಮಟ್ಟಿಗೆ ಡೆತ್ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 1136 ಜನ ಡಿಸ್ಸಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 251 ಜನ ಇಂದು ಡಿಸ್ಸಾರ್ಜ್ ಆಗಿದ್ದಾರೆ.Sign in to your account
Username or Email Address


Password

 Remember Me


