ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದ ಲಕ್ಷಣಗಳು ಗೋಚರಿಸುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲದೇ ಕೆಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 33-23
ಮಂಗಳೂರು: 31-27
ಶಿವಮೊಗ್ಗ: 32-23
ಬೆಳಗಾವಿ: 34-23
ಮೈಸೂರು: 33-22ಮಂಡ್ಯ: 34-23
ಮಡಿಕೇರಿ: 26-20
ರಾಮನಗರ: 34-23
ಹಾಸನ: 29-22
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 34-23ಕೋಲಾರ: 34-24
ತುಮಕೂರು: 33-23
ಉಡುಪಿ: 29-26
ಕಾರವಾರ: 32-27
ಚಿಕ್ಕಮಗಳೂರು: 28-21
ದಾವಣಗೆರೆ: 35-24ಹುಬ್ಬಳ್ಳಿ: 34-23
ಚಿತ್ರದುರ್ಗ: 34-23
ಹಾವೇರಿ: 34-24
ಬಳ್ಳಾರಿ: 29-26
ಗದಗ: 36-24
ಕೊಪ್ಪಳ: 37-25ರಾಯಚೂರು: 40-28
ಯಾದಗಿರಿ: 40-28
ವಿಜಯಪುರ: 39-25
ಬೀದರ್: 39-27
ಕಲಬುರಗಿ: 40-28
ಬಾಗಲಕೋಟೆ: 32-22Sign in to your account
Username or Email Address


Password

 Remember Me


