ಕಾರವಾರ: ಸರ್ಕಾರದಲ್ಲಿ ಹಣವಿಲ್ಲ ಎಂದು ಕಾರ್ಮಿಕ ಇಲಾಖೆ ನಿಧಿಯನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾರ್ಮಿಕ ಇಲಾಖೆಯ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಮಿಕ ಇಲಾಖೆಯಿಂದ ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯಧನದ ಮಂಜುರಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಕಾರ್ಮಿಕರಿಂದ ಸಂಗ್ರಹಿಸಲ್ಪಟ್ಟ ನಿಧಿಯು ಕಾರ್ಮಿಕರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ವರ್ಧನೆಗೆ ಉಪಯೋಗವಾಗಬೇಕು ಎಂದರು. ಇದನ್ನೂ ಓದಿ: ಅಭಿಮನ್ಯು ಟೀಂಗೆ ಹೊಸ ಮೆಂಬರ್ ಎಂಟ್ರಿ- ಅಶ್ವತ್ಥಾಮ ಭವಿಷ್ಯದ ಕ್ಯಾಪ್ಟನ್!ಸರ್ಕಾರದಲ್ಲಿ ಹಣವಿಲ್ಲವೆಂದು ಕಾರ್ಮಿಕ ಇಲಾಖೆಯ ನಿಧಿಯನ್ನು ದುರುಪಯೋಗಪಡಿಸಿಕೊಳ್ಳಬಾರದು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎಂದು ಸಲಹೆ ನಿಡಿದರು.Sign in to your account
Username or Email Address


Password

 Remember Me


