ಮಂಗಳೂರು: ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳು ದೇವರ ದರ್ಶನ, ತೀರ್ಥ, ಪ್ರಸಾದ, ಅನ್ನಸಂತರ್ಪಣೆಯಲ್ಲಿ ಪಾಲ್ಗೊಳ್ಳಬಹುದು. ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದ್ದು, ಯಾವುದೇ ಸೇವೆಗಳಿಗೆ ಅವಕಾಶ ನೀಡಿಲ್ಲ. ಇದನ್ನೂ ಓದಿ: ಇನ್ನೂ ಮುಗಿದಿಲ್ಲ ಗೊಂದಲ: ‘ಲಾಟರಿ’ ಮೂಲಕ ಗಣೇಶೋತ್ಸವಕ್ಕೆ ಅನುಮತಿವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿಲ್ಲ. ಶನಿವಾರ ಮತ್ತು ಭಾನುವಾರಗಳಂದು ಎಲ್ಲ ರೀತಿಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.Sign in to your account
Username or Email Address


Password

 Remember Me


