ಬೆಂಗಳೂರು: ರಾಜ್ಯದಲ್ಲಿ ಇಂದು 1,102 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆಯಾಗಿದೆ.ಇಂದು 1,458 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 17,058 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,58,090 ಜನರಿಗೆ ಸೋಂಕು ತಗುಲಿದೆ. 29,03,547 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.64ಕ್ಕೆ ಇಳಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.54ರಷ್ಟಿದೆ. ಇದನ್ನೂ ಓದಿ: ಒಂದೇ ಗ್ರಾಮದ 51 ಜನರಿಗೆ ಕೊರೊನಾ ಪಾಸಿಟಿವ್- ಗ್ರಾಮಸ್ಥರಲ್ಲಿ ಆತಂಕಒಟ್ಟು 1,69,621 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,35,093 + 34,528 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 338 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಮರಣ ಹೊಂದಿದ್ದಾರೆ. 277 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 6, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 338, ಚಾಮರಾಜನಗರ 8, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 51, ಚಿತ್ರದುರ್ಗ 6, ದಕ್ಷಿಣ ಕನ್ನಡ 200, ದಾವಣಗೆರೆ 7, ಧಾರವಾಡ 5, ಹಾಸನ 51, ಹಾವೇರಿ 2, ಕಲಬುರಗಿ 7, ಕೊಡಗು 33, ಕೋಲಾರ 12, ಕೊಪ್ಪಳ 4, ಮಂಡ್ಯ 20, ಮೈಸೂರು 64, ರಾಯಚೂರು 3, ರಾಮನಗರ 4, ಶಿವಮೊಗ್ಗ 55, ತುಮಕೂರು 31, ಉಡುಪಿ 133, ಉತ್ತರ ಕನ್ನಡ 40 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


