ಬೆಂಗಳೂರು: ಹಾಸ್ಯ ನಟ ದಿ.ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣ ನಗರದ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ.ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಬರುತ್ತಿದ್ದಾಗ ಹೆಬ್ಬಾಳ ಫ್ಲೈ ಓವರ್ ಬಳಿ ದಿ.ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ಮಂಗಳಮುಖಿಯರು ಬ್ಯಾಗ್ ಇಡಿದು ಎಳೆದ ಕಾರಣ ರಕ್ಷಕ್ ಗಾಡಿಯಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಿಂದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ದ್ವಿಚಕ್ರ ವಾಹನ ಸಹ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ ಸಂಬಂಧ ಯಾರ ಒತ್ತಡಕ್ಕೂ ಪೊಲೀಸರು ಹಿಂಜರಿಯುವುದಿಲ್ಲ: ಅರಗ ಜ್ಞಾನೇಂದ್ರಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ದ್ವಿಚಕ್ರ ವಾಹನವನ್ನು ಫ್ಲೈಓವರ್ ಮೇಲೆ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದರು. ಬಳಿಕ ಹೆಬ್ಬಾಳ ಪೊಲೀಸರ ನೆರವಿನಿಂದ ಗಾಡಿಯನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


