ಶಿವಮೊಗ್ಗ: ಸಾಕು ತಂದೆಯೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.ಸಾಕು ತಂದೆ ಮಾತ್ರವಲ್ಲದೆ ಎದುರು ಮನೆಯ ಯುವಕ ಸಹ ಅಪ್ರಾಪ್ತೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಹಾಗೂ ಎದುರು ಮನೆ ಯುವಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೊದಲ ಪತ್ನಿ ತೊರೆದಿದ್ದ ಸಾಕು ತಂದೆ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ. ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ ಬಾಲಕಿಯ ಮೇಲೆ ಕಣ್ಣು ಹಾಕಿದ ಆರೋಪಿ, ಪತ್ನಿ ಇಲ್ಲದ ಸಂದರ್ಭದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಶುರು ಮಾಡಿದ್ದ. ಅಲ್ಲದೆ ಎದುರು ಮನೆಯ ಯುವಕ ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ. ಇದನ್ನೂ ಓದಿ: ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರ ದಾಳಿಇದೀಗ ಕಳೆದ ಮೂರು ದಿನದ ಹಿಂದೆ ಶಾಲೆ ಆರಂಭಗೊಂಡಿದ್ದು, ಆರನೇ ತರಗತಿ ಓದುತ್ತಿರುವ ಬಾಲಕಿ ಶಾಲೆಗೆ ಬಂದಿದ್ದಾಳೆ. ಈ ವೇಳೆ ಬಾಲಕಿಯಲ್ಲಿನ ಬದಲಾವಣೆಯನ್ನು ಗಮನಿಸಿದ ಶಿಕ್ಷಕಿಗೆ ಅನುಮಾನ ಬಂದಿದ್ದು, ನಂತರ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಶಿಕ್ಷಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.Sign in to your account
Username or Email Address


Password

 Remember Me


