ಬೆಂಗಳೂರು: ರಾಜ್ಯದಲ್ಲಿ ಇಂದು 790 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಹಾಮಾರಿ 15 ಜನರನ್ನು ಬಲಿ ಪಡೆದಿದ್ದು, 790 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಒಟ್ಟು 17,432 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 29,56,998 ಜನರಿಗೆ ಸೋಂಕು ತಗುಲಿದೆ. 29,02,089 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.71ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.76ರಷ್ಟಿದೆ. ಇದನ್ನೂ ಓದಿ: ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರುಒಟ್ಟು 1,18,791 ಸ್ಯಾಂಪಲ್ (ಆರ್ ಟಿ ಪಿಸಿಆರ್ 81,391 + 37,400 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 248 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 362 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 248, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 49, ಚಿತ್ರದುರ್ಗ 4, ದಕ್ಷಿಣ ಕನ್ನಡ 227, ದಾವಣಗೆರೆ 9, ಹಾಸನ 25, ಹಾವೇರಿ 1, ಕಲಬುರಗಿ 3, ಕೊಡಗು 31, ಕೋಲಾರ 10, ಮಂಡ್ಯ 12, ಮೈಸೂರು 53, ರಾಯಚೂರು 2, ರಾಮನಗರ 1, ಶಿವಮೊಗ್ಗ 20, ತುಮಕೂರು 44, ಉಡುಪಿ 74, ಉತ್ತರ ಕನ್ನಡ 8 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


