ನವದೆಹಲಿ: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.Met the Union Minister of Railways Shri @AshwiniVaishnaw in New Delhi today and discussed regarding on going Railway projects and Infrastructure in Karnataka. Minister for Water Resources Shri @GovindKarjol, Minister for Housing @VSOMANNA_BJP were present. pic.twitter.com/YJ4GRB4MPs— Basavaraj S Bommai (@BSBommai) September 7, 2021ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಕಲಬುರ್ಗಿಯಲ್ಲಿ ರೈಲ್ವೆ ಡಿವಿಶನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿ.ಪಿ.ಆರ್ ಮಾಡಲಾಗಿದ್ದರೂ ಅದನ್ನೂ ಪ್ರಶ್ನಿಸಲಾಗಿದೆ. ಆದಷ್ಟು ಬೇಗ ತಡೆಯಾಜ್ಞೆಯನ್ನು ತೆರವುಗೊಳಿಸಲು ಪ್ರಯತ್ನಿಸಿ, ಕಾಮಗಾರಿ ಪ್ರಾರಂಭಿಸುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ತ್ವರಿತಗತಿಯಲ್ಲಿ ಮುಗಿಸುವಂತೆ ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


