ಮಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಆ್ಯಂಕರ್ ಕಮ್ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್  ಶೀಟ್‍ನಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಲಾಗಿದೆ.ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ, ಅನುಶ್ರೀ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದರು. ಅಲ್ಲದೆ ರೂಂಗೆ ಕೂಡ ತರುತ್ತಿದ್ದರು ಎಂದು  ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀ ಮತ್ತೆ ಡ್ರಗ್ಸ್ ಶಾಕ್ ಎದುರಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ಸಾಧ್ಯತೆ






 Advertisement 




Sign in to your account
Username or Email Address


Password

 Remember Me


