ಚಿಕ್ಕೋಡಿ (ಬೆಳಗಾವಿ): ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದರು.ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನನ್ನನ್ನು ಕೈಬಿಡಲಾಗಿದೆ. ಮುಂದೆ ಸಚಿವ ಸಂಪುಟದಲ್ಲಿ ನನಗೆ ಮಂತ್ರಿಗಿರಿ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದರು. ಇದನ್ನೂ ಓದಿ: ಮೊಬೈಲ್ ನುಂಗಿ 4 ದಿನ ಹೊಟ್ಟೆಯಲ್ಲಿಟ್ಟುಕೊಂಡಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಸಿಕ್ಕಿದ್ದು ಸಂತೋಷ ಉಂಟುಮಾಡಿದೆ. ಈ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೃಷ್ಣಾ ನದಿ ಬತ್ತಿ ಹೋಗುತ್ತದೆ. ಆ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯದಿಂದ ನಮಗೆ ನೀರು ಹರಿಸುವ ಯೋಜನೆ ಒಪ್ಪಂದ ಸದ್ಯದಲ್ಲೇ ಆಗುವುದರಿಂದ ನಮ್ಮ ಭಾಗಕ್ಕೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆಮರಾಠಾ ಮಹಾಸಭಾ ಸಿಎಂ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಮರಾಠಾ ಸಮುದಾಯದ ಹಲವಾರು ಬೇಡಿಕೆಗಳ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದಾರೆ. ಕರ್ನಾಟಕ ಭಾಗದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಕಾರಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಕೇಳಿಕೊಂಡಿದ್ದಾರೆ. ಜೊತೆ ನನಗೆ ಸಚಿವ ಸ್ಥಾನ ನೀಡುವಂತೆಯೂ ಸಿಎಂಗೆ ಮನವಿ ಸಲ್ಲಿಸಿದ್ದಾರೆಂದು ಹೇಳಿದರು.Sign in to your account
Username or Email Address


Password

 Remember Me


