ಮಂಡ್ಯ: ಜಿಲ್ಲೆಯಲ್ಲಿ ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡರವರ ಪತ್ನಿ ಹಾಗೂ ಪುತ್ರಿ ಕಣ್ಣೀರು ಹಾಕಿದ್ದಾರೆ.ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ನನ್ನ ಸಾಧನೆಗೆ ಪತ್ನಿ, ಪುತ್ರಿಯರ ಶಕ್ತಿಯೇ ಕಾರಣ. ಅವರ ಆಸೆಯಂತೆ ಇಂದು ಸಹೋದರಿಯರಿಗೆ ಬಾಗಿನ ಸಮರ್ಪಣೆ ಮಾಡುತ್ತಿದ್ದೇನೆ. ಪತ್ನಿ, ಪುತ್ರಿಯರ ತ್ಯಾಗ, ಶಕ್ತಿಯೇ ನನ್ನ ಈ ಸಾಧನೆಗೆ ಕಾರಣವಾಗಿದೆ. ನನ್ನ ಅಮ್ಮನ ಬಳಿಕ ಪತ್ನಿ, ಪುತ್ರಿಯರ ಕಾಳಜಿಯನ್ನು ನಾನು ಯಾವತ್ತು ಮರೆಯುವುದಿಲ್ಲ ಎಂದು ಭಾವುಕರಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿದ್ದ ನಾರಾಯಣಗೌಡ ಅವರ ಪತ್ನಿ ದೇವಕಿ, ಪುತ್ರಿ ಲೀನಾ ನಾರಾಯಣಗೌಡ ಅವರ ಮಾತುಗಳನ್ನು ಕೇಳಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ನೆಲೆಯೂರುವ ಸಲುವಾಗಿ ನಾರಾಯಣಗೌಡ ಪ್ರತಿ ಬಾರಿಯೂ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಜೊತೆಗೆ ಸಂಪ್ರದಾಯ ಪಾಲನೆಗಾಗಿ, ಇಂದು 500ಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡಿದ್ದಾರೆ. ಸೀರೆ ಜೊತೆಗೆ ಅರಿಶಿನ ಕುಂಕುಮ, ಹೂ ಮತ್ತು ಬಾಗಿನ ನೀಡಿ ಮಹಿಳೆಯರಿಗೆ ಗೌರಿ-ಗಣೇಶ ಹಬ್ಬದ ಶುಭಾಷಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ, ವೈರಲ್ ಫಿವರ್‌ನಿಂದ ಮಕ್ಕಳನ್ನು ರಕ್ಷಿಸಿ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಕಿಡಿ






 Advertisement 




Sign in to your account
Username or Email Address


Password

 Remember Me


