ಬೆಂಗಳೂರು: ವಾಯುಪುತ್ರ ದಿ. ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ದಂಪತಿಯ ಮುದ್ದಿನ ಮಗನ ನಾಮಕರಣದ ಫೋಟೋಗಳನ್ನು ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಹೌದು. ನಟಿ ಸುಧಾರಾಣಿ ಅವರು ಚಿರು ಪುತ್ರನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಇದರ ಕೆಲವೊಂದು ಫೋಟೋಗಳನ್ನು ತಮ್ಮ ಇನ್ ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಯುವರಾಜ ಜೂನಿಯರ್ ಚಿರು ಈಗ ರಾಯನ್ ರಾಜ್ ಸರ್ಜಾ ಜೊತೆಗಿನ ಫೋಟೋಗಳಾಗಿದ್ದು, ಇದರಲ್ಲಿ ರಾಯನ್ ತನ್ನ ಫೋಟೋ ಚೆನ್ನಾಗಿ ಬಂದಿದ್ಯಾ ಅಂತ ಮೊಬೈಲ್ ಚೆಕ್ ಮಾಡ್ತಿದ್ದಾನೆ ಎಂದು ಬರೆದುಕೊಂಡಿದ್ದಾರೆ.  A post shared by Sudharani (@sudharanigovardhan)ಸುಧಾರಾಣಿ ಅವರು ಫೋಟೋ ಅಪ್ಲೋಡ್ ಮಾಡುತ್ತಿದ್ದಂತೆಯೇ ಮೇಘನಾ ಕೂಡ ಕಾಮೆಂಟ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ತುಂಬಾ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಗನಿಗೆ ರಾಯನ್ ಹೆಸರಿಟ್ಟಿದ್ದಕ್ಕೆ ಮೇಘನಾ ಸ್ಪಷ್ಟನೆಈ ಹಿಂದೆ ನಟಿ, ಸಂಸದೆ ಸುಮಲತಾ ಅಂಬರೀಶ್ ಕೂಡ ಅಭಿಷೇಕ್ ಅಂಬರೀಶ್, ಸುಂದರ್ ರಾಜ್, ಧ್ರವಾ ಸರ್ಜಾ, ಮೇಘನಾ ರಾಜ್ ಮತ್ತು ಅವರು ಮಗ ಒಂದೇ ಫ್ರೇಮ್‍ನಲ್ಲಿ ಇರುವ ಅಂದದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದರು. ಅಲ್ಲದೆ ಪುಟ್ಟ ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಸ್ವರ್ಗದ ಬಾಗಿಲನ್ನು ತೆಗೆದುಕೊಟ್ಟ ಯುವರಾಜನೇ ರಾಯನ್: ಮೇಘನಾ ರಾಜ್  A post shared by Sumalatha Ambareesh (@sumalathaamarnath)ಒಟ್ಟಿನಲ್ಲಿ ಮೇಘನಾ ಮಗನ ನಾಮಕರಣ ಕಾರ್ಯಕ್ರಮ ಇತ್ತೀಚೆಗೆ ಹಿಂದೂ ಸಂಪ್ರದಾಯದ ಜೊತೆಗೆ ಕ್ರೈಸ್ತ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನಟ- ನಟಿಯರು ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದಾರೆ. ಕೆಲವರು ರಾಯನ್ ರಾಜ್ ಸರ್ಜಾ ಎಂಬ ಹೆಸರಿನ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಮೇಘನಾ ಸ್ಪಷ್ಟನೆ ಕೂಡ ನೀಡಿದ್ದರು.  ಇದನ್ನೂ ಓದಿ:  ಚಿರು, ಮೇಘನಾ ಪುತ್ರ ಈಗ ‘ರಾಯನ್ ರಾಜ್ ಸರ್ಜಾ’Sign in to your account
Username or Email Address


Password

 Remember Me


