ಮಂಡ್ಯ: ಕೊರೊನಾವನ್ನು ಉತ್ತಮವಾಗಿ ನಿರ್ವಹಣೆ ಮಾಡುವಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.ಪಾಂಡವಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಹೊಂಬಾಳೆ ಗ್ರೂಪ್ ನ ಸಿ.ಎಸ್.ಆರ್ ಯೋಜನೆಯಡಿ ನೂತನವಾಗಿ ಸ್ಥಾಪಿಸಿರುವ ಆಮ್ಲಜನಕದ ಉತ್ಪಾದನ ಘಟಕಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶವೇ ನಲುಗುತ್ತಿರುವಾಗ ಬಹಳ ಧೈರ್ಯದಿಂದ ಜಿಲ್ಲೆಯಲ್ಲಿ ಕೋವಿಡ್ ಹತೋಟಿಗೆ ತರುವಲ್ಲಿ ಜಿಲ್ಲೆಯ ಸಚಿವರು, ಎಲ್ಲ ಶಾಸಕರು ಹಾಗೂ ಜಿಲ್ಲಾಡಳಿತದ ಶ್ರಮವನ್ನು ಶ್ಲಾಘಿಸಿದರು.ಆಕ್ಸಿಜನ್ ಉತ್ಪಾದಕ ಘಟಕಗಳ ಜೊತೆಗೆ ಜನರೇಟರ್ ಪ್ಲಾಂಟ್‍ಗಳು ಹಾಗೂ ಇತರೆ ಅವಶ್ಯಕವಿರುವ ಎಲ್ಲ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದ್ದು, ಇದೊಂದು ಉತ್ತಮ ಪ್ಲಾಂಟ್ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿಲ್ಲ: ಸುಧಾಕರ್ಮಂಡ್ಯ ಜಿಲ್ಲೆಗೆ ಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಹಾಗೂ ಕೋವಿಡ್ ಮೂರನೇ ಅಲೆ ತಡೆಗಟ್ಟುವಲ್ಲಿ ಲಸಿಕಾಕರಣವನ್ನು ಯಶಸ್ವಿಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಮಾತನಾಡಿ, ಎರಡನೇ ಅಲೆಯಲ್ಲಿ ಆಕ್ಸಿಜನ್ ಪೂರೈಸುವಲ್ಲಿ ಬಹಳ ಕಷ್ಟವಾಗಿತ್ತು. ಆದರೆ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಆಕ್ಸಿಜನ್ ಉತ್ಪಾದನ ಘಟಕ ನಿರ್ಮಾಣದಲ್ಲಿ ಪಟ್ಟ ಪ್ರಯತ್ನ ಇಂದು ಕೈಗೂಡಿದೆ ಎಂದರು. ಇದನ್ನೂ ಓದಿ: ಜಮೀರ್ ಕೂಡ ಒಂಥರಾ ತಾಲಿಬಾನ್: ಸೊಗಡು ಶಿವಣ್ಣರಾಜ್ಯದಲ್ಲಿಯೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಕೆ.ಆರ್.ಪೇಟೆ ತಾಲೂಕು, ನಂತರ ಮಳವಳ್ಳಿ, ಮಂಡ್ಯ ತಾಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲಾಗಿದೆ. ಸಿ.ಎಸ್.ಆರ್ ನಿಧಿಯಡಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಆಕ್ಸಿಜನ್ ಪ್ಲಾಂಟ್ ಸ್ಥಾಪನಾ ಕಾರ್ಯ ನಡೆಯುತ್ತಿದೆ ಎಂದರು.ಇದೇ ವೇಳೆ ಪಾಂಡವಪುರ ತಾಲೂಕಿನ ಚಿನಕುರುಳಿ ಸರ್ಕಾರಿ ಐಟಿಐ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಪ್ರಮೋದ್ ಪಾಟೀಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


