ಮೈಸೂರು: ಪುಟ್ಟ ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಂಡರೂ ಸಾಲದು ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಬಾಲಕಿಯೊಬ್ಬಳು 5 ರೂ. ನಾಣ್ಯ ನುಂಗಿ ಮೃತಪಟ್ಟ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಖುಷಿ(4) ಎಂದು ಗುರುತಿಸಲಾಗಿದೆ. ಈ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಸೌಂದರ್ಯಕ್ಕಿಂತ ಆರೋಗ್ಯವೇ ಮುಖ್ಯ: ರಮ್ಯಾ ಖುಷಿ ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದಳು. ಎಂದಿನಂತೆ ಶುಕ್ರವಾರವೂ ಆಟವಾಡುತ್ತಿದ್ದಳು. ಈ ವೇಳೆ ತನ್ನ ಕೈಯಲ್ಲಿದ್ದ ನಾಣ್ಯವನ್ನು ಖುಷಿ ನುಂಗಿದ್ದಾಳೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ಖುಷಿಯನ್ನು ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಂತೆಯೇ ಖುಷಿ ಕೊನೆಯುಸಿರೆಳೆದಿದ್ದಾಳೆ.Sign in to your account
Username or Email Address


Password

 Remember Me


