ಧಾರವಾಡ: ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದಕ್ಕೆ ಸಮಾಧಾನ ಇದೆ. ಆದರೆ ಆನಂದ ಇಲ್ಲ ಎಂದು ಹಿಂದೂಪರ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ಧಾರವಾಡದಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ನಾಲ್ಕು ದಿನ ಇರುವಾಗ ಅನುಮತಿ ನೀಡಿದ್ದನ್ನು ನೋಡಿ ನಗಬೇಕೊ ಅಳಬೇಕೊ ಗೊತ್ತಾಗ್ತಿಲ್ಲ. ವಾರ್ಡ್, ಗ್ರಾಮಕ್ಕೆ ಒಂದು ಗಣೇಶ ಅನ್ನೋ ನಿಯಮ ಸರಿಯಲ್ಲ. ನೀವು ಜನಾಶೀರ್ವಾದ ಯಾತ್ರೆಯಲ್ಲಿ ಏನು ಮಾಡಿದ್ರಿ ಅನ್ನೋದು ಜನಕ್ಕೆ ಗೊತ್ತಿದೆ. ಅವರು ಉಗೀತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿನಮಗೆ ನೀವು ನಿಯಮ ಹೇಳ್ತೀರಾ? ನಮಗೇನು ನೀವು ಷರತ್ತು ಹಾಕುವ ಅಗತ್ಯವಿಲ್ಲ. ಕೊರೊನಾ ನಿಯಮಾನುಸಾರ ರಾತ್ರಿ 9ರ ನಂತರವೂ ಗಣೇಶೋತ್ಸವ ಆಚರಿಸ್ತೇವೆ ಎಂದು ಸರ್ಕಾರದ ಮಾರ್ಗಸೂಚಿಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವಕ್ಕೆ 5 ದಿನ ಅವಕಾಶ ಕೊಟ್ಟ ಸರ್ಕಾರಸರ್ಕಾರದ ಮಾರ್ಗಸೂಚಿ ಏನು?
ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ 5 ದಿನಗಳ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗಣೇಶೋತ್ಸವ ಮೆರವಣಿಗೆ ಅವಕಾಶವಿಲ್ಲ. 30 ಜನರ ಮಿತಿ ನಿಗಧಿಪಡಿಸಿದ್ದು, ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ. ವಾರ್ಡ್‍ಗೆ ಒಂದು ಅಥವಾ ಗ್ರಾಮಕ್ಕೊಂದು ಗಣಪತಿ ಕೂರಿಸಲು ಅವಕಾಶ ನೀಡಿದೆ.ಸರ್ಕಾರ ನಿಗದಿತ ಸ್ಥಳದಲ್ಲಿ ಭಕ್ತರು ಸೇರಲು ಅವಕಾಶ ನೀಡಿದೆ. ಗಣೇಶೋತ್ಸವದಲ್ಲಿ ಮನರಂಜನಾ ಕಾರ್ಯಕ್ರಮಗಳಾದ ಆರ್ಕೆಸ್ಟ್ರಾ, ಡಿಜೆ ಅದ್ಧೂರಿ ಮೆರವಣಿಗೆ ಅವಕಾಶ ನಿರಾಕರಿಸಲಾಗಿದ್ದು, ನಿಗದಿತ ಸಂಖ್ಯೆಯಲ್ಲಿ ಭಕ್ತರು ಸೇರಲು ಅವಕಾಶ ಕಲ್ಪಿಸಿದೆ. ಕೆರೆಗಳಲ್ಲಿ ಗಣೇಶ ವಿರ್ಸಜನೆಗೆ ನಿರ್ಬಂಧ ಹೇರಲಾಗಿದ್ದು, ಬಿಬಿಎಂಪಿ ಸೂಚಿಸಿದ ಸ್ಥಳದಲ್ಲೇ ವಿರ್ಸಜನೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಮತ್ತೆ ಒಂದಾದ ‘ಮುಂಗಾರು ಮಳೆ’ ಚಿತ್ರತಂಡಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲೆ ವಿಸರ್ಜನೆಗೆ ಅವಕಾಶ ಮಾಡಲಾಗಿದ್ದು, ಮೊಬೈಲ್ ಟ್ಯಾಂಕರ್‍ ನಲ್ಲಿ ವಿಸರ್ಜನೆಗೆ ಪ್ಲ್ಯಾನ್ ಮಾಡಲಾಗಿದೆ. ಇದರೊಂದಿಗೆ ಗಣೇಶೋತ್ಸವ ಮುಗಿಯುವವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಸಲು ತೀರ್ಮಾನಿಸಲಾಗಿದೆ.






 Advertisement 




Sign in to your account
Username or Email Address


Password

 Remember Me


