ಬೆಂಗಳೂರು: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಎರಡು ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ಎರಡು ಲಾರಿ ಹಾಗೂ ಕಾರು ನಡುವೆ ಸರಣಿ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಹಾಗೂ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಗಂಟೆಗಳ ಕಾಲ ಪರದಾಡುವಂತಾಗಿತ್ತು. ಇದನ್ನೂ ಓದಿ: ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕಳ್ಳ ಅಂದರ್ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಸಂಪೂರ್ಣವಾಗಿ ಸ್ತಬ್ಧವಾಗಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿಯುತಿದ್ದಂತೆ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಎರಡು ಇಕ್ಕೆಲದಲ್ಲಿ ಅವೈಜ್ಞಾನಿಕ ವಾಹನಗಳ ಪಾರ್ಕಿಂಗ್ ನಿಂದ ಇಂತಹ ಅಪಘಾತಗಳು ಪ್ರತಿನಿತ್ಯ ಸಂಭವಿಸುತ್ತಿವೆ. ಕೂಡಲೇ ಪೊಲೀಸರು ಈ ಅವೈಜ್ಞಾನಿಕ ಪಾರ್ಕಿಂಗ್‍ಗೆ ಕಡಿವಾಣ ಹಾಕಿ, ಅಪಘಾತ ತಪ್ಪಿಸುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


