ಬೆಂಗಳೂರು: ಬಹಳ ರಿಸ್ಕ್ ತೆಗೆದುಕೊಂಡು ಮನೆ ಮನೆಗೂ ಬೆಳಗ್ಗೆಯೇ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸುತ್ತದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಮಳೆ ಇರಲಿ, ಚಳಿ ಇರಲಿ ಅಥವಾ ಯಾವುದೇ ತುರ್ತು ಸಂದರ್ಭವೂ ಇರಲಿ. ಬೆಳಗ್ಗೆ ನಾವು ನಿದ್ದೆಯಿಂದ ಏಳುವುದಕ್ಕೆ ಮುನ್ನವೇ ಪತ್ರಿಕೆ ನಮ್ಮ ಮನೆಯ ಅಂಗಳದಲ್ಲಿರುತ್ತದೆ. ಇದಕ್ಕೆ ಕಾರಣರಾದವರನ್ನು ಅಲಕ್ಷ್ಯ ಮಾಡುವಂತಿಲ್ಲ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆಕೋವಿಡ್ ಸಮಯದಲ್ಲಿಯೂ ನಮ್ಮ ಮನೆಗೆ ಪತ್ರಿಕೆ ಬರುವುದು ನಿಲ್ಲಲಿಲ್ಲ. ತಮ್ಮ ಜೀವವನ್ನೂ ಲೆಕ್ಕಿಸದೇ ಮನೆಮನೆಗೂ ಪತ್ರಿಕೆ ಮುಟ್ಟಿಸಿದ್ದು ವಿತರಕರ ವೃತ್ತಿ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್ಸಾಮಾಜಿಕವಾಗಿ ವೃತ್ತಿ ತಾರತಮ್ಯ ಇರಬಾರದು. ಮನೆ ಮನೆಗೂ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ನಾವು ಮುಖ್ಯವಾಹಿನಿಯಲ್ಲಿ ಎಲ್ಲ ವೃತ್ತಿಪರರಿಗೂ ಸಿಗುವಂಥ ಸೌಲಭ್ಯಗಳು ಸಿಗಬೇಕು. ಸರ್ಕಾರದಿಂದ ಸಿಗಬಹುದಾದ ಎಲ್ಲ ಅನುಕೂಲಗಳನ್ನು ಮಾಡಿಕೊಡಲಾಗುವುದು. ಪ್ರತಿದಿನ ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನವೇ ನಮಗೆ ಪತ್ರಿಕೆ ತಲುಪಿಸುವ ವಿತರಕರು, ಬಹುಬೇಗ ನಿದ್ದೆಯಿಂದ ಎದ್ದು, ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಅವರಿಗೆ ರಜೆ ಎಂಬುದೇ ಅಪರೂಪ. ಇವರ ಕಷ್ಟಕ್ಕೆ ನಾವು ಮಿಡಿಯಬೇಕು ಎಂದು ಸಚಿವರು ನುಡಿದರು.ಅಸಂಘಟಿತ ವಲಯಕ್ಕೆ ಪತ್ರಿಕಾ ವಿತರಕರು:
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ವಿತರಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು ಅವರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವುದಾಗಿ ಭರವಸೆ ನೀಡಿದರು. ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಪತ್ರಿಕಾ ವಿತರಕರ ಪರವಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.






 Advertisement 




Sign in to your account
Username or Email Address


Password

 Remember Me


