ಚಾಮರಾಜನಗರ: ಪ್ರೀತ್ಸೆ ಎಂದು ಅಪ್ರಾಪ್ರ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಪ್ರೇಮಿಗೆ ಚಾಮರಾಜನಗರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್ ಪುರಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.ಪ್ರಸಾದ್ ಕುಮಾರ್(20) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಈತ ಚಾಮರಾಜನಗರ ತಾಲೂಕಿನ ಲಿಂಗರಾಜಪುರ ಗ್ರಾಮದವನಾಗಿದ್ದಾನೆ. 2019ರ ಮೇ 27 ರಂದು ಅದೇ ಗ್ರಾಮದ 16 ವರ್ಷದ ಬಾಲಕಿಯೊಬ್ಬಳು ಮನೆ ಮುಂದೆ ನಿಂತಿದ್ದ ವೇಳೆ ಬಲವಂತದಿಂದ ಆಕೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ತಾನು ಪ್ರೀತಿಸುತ್ತಿದ್ದು, ನೀನು ಪ್ರೀತಿಸಬೇಕೆಂದು ಒತ್ತಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದನ್ನೂ ಓದಿ: ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್ ಈ ಸಂಬಂಧ ಬಾಲಕಿ ತಂದೆ ಚಾಮರಾಜನಗರ ಪೂರ್ವ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆದು ಪ್ರಸಾದ್ ಕುಮಾರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಒಂದು ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದ್ದಲ್ಲಿ ಎರಡು ತಿಂಗಳು ಸೆರೆವಾಸದ ಶಿಕ್ಷೆ ನೀಡಿದ್ದಾರೆ. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ರಜೆ ಮಂಜೂರಿಗೆ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಸಾರಿಗೆ ಅಧಿಕಾರಿSign in to your account
Username or Email Address


Password

 Remember Me


