ಕೋಲಾರ: ಯುವತಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ.ಹಲ್ಲೆ ಮಾಡಿದ ವೀಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಯುವಕರ ಗುಂಪು ಬಾಬುಗೆ ಮನಬಂದಂತೆ ಥಳಿಸಿದೆ. ಯುವಕರಾದ ಅಭಿ, ನಾಗೇಂದ್ರ, ಗಂಗಾಧರ್, ನರೇಷ್ ಗುಂಪಿಂದ ಹಲ್ಲೆಯಾಗಿದೆ. ಇದನ್ನೂ ಓದಿ:ಪ್ಯಾರಾಲಿಂಪಿಕ್ಸ್ – ಶೂಟಿಂಗ್‍ನಲ್ಲಿ ಮನೀಷ್‍ಗೆ ಚಿನ್ನ, ಸಿಂಗ್‍ರಾಜ್‍ಗೆ ಬೆಳ್ಳಿಬಾಬು ಹಾಗೂ ಮತ್ತೊಬ್ಬ ಯುವಕ ತಾಡಿಗೋಳ್ ಗ್ರಾಮದ ಯುವತಿಯರನ್ನು ಚುಡಾಯಿಸುತ್ತಿದ್ದರು. ಚುಡಾಯಿಸಬೇಡ ಎಂದು ಎಚ್ಚರಿಕೆ ನೀಡಿದ್ದರು, ಮತ್ತೊಮ್ಮೆ ಚುಡಾಯಿಸಿದ್ದಕ್ಕೆ ಯುವಕರು ಧರ್ಮದೇಟು ನೀಡಿದ್ದಾರೆ. ಬಾಬು ಹಿಂಬದಿಯ ಸೀಟ್ ನಲ್ಲಿದ್ದ ಓರ್ವ ಯುವತಿ ಹಾಗೂ ಯುವಕನಿಗೂ ಏಟು ಬಿದ್ದಿವೆ. ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ, ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


