ಬೆಂಗಳೂರು: ರಾಜ್ಯದಲ್ಲಿಂದು 1,220 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 18,404 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಒಟ್ಟು 1,175 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 1,79,227 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.68 ಮತ್ತು ಮರಣ ಪ್ರಮಾಣ ಶೇ.1.55 ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 29,53,064 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 37,380ಕ್ಕೆ ಏರಿಕೆಯಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ 319 ಜನರಿಗೆ ಸೋಂಕು ತಗುಲಿದ್ರೆ 202 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 7,718 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಹಾಮಾರಿ ಬೆಂಗಳೂರಿನಲ್ಲಿ ಒರ್ವ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 319, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 34, ಚಿತ್ರದುರ್ಗ 12, ದಕ್ಷಿಣ ಕನ್ನಡ 232, ದಾವಣಗೆರೆ 8, ಧಾರವಾಡ 9, ಗದಗ 4, ಹಾಸನ 81, ಹಾವೇರಿ 3, ಕಲಬುರಗಿ 3, ಕೊಡಗು 64, ಕೋಲಾರ 9, ಕೊಪ್ಪಳ 2, ಮಂಡ್ಯ 20, ಮೈಸೂರು 86, ರಾಯಚೂರು 0, ರಾಮನಗರ 3, ಶಿವಮೊಗ್ಗ 35, ತುಮಕೂರು 51, ಉಡುಪಿ 150, ಉತ್ತರ ಕನ್ನಡ 32, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಸೈಕಲ್ ರ‍್ಯಾಲಿ ಯೋಧರನ್ನು ಆತ್ಮೀಯವಾಗಿ ಬರಮಾಡಿಕೊಂಡ ಚಿಕ್ಕಬಳ್ಳಾಪುರ ಶಾಸಕಇಂದಿನ 03/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/0cQ902Tt2Y @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/cIQgGDyUai— K'taka Health Dept (@DHFWKA) September 3, 2021Sign in to your account
Username or Email Address


Password

 Remember Me


