ಚಿಕ್ಕಬಳ್ಳಾಪುರ: ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ ಪಂಚಾಯ್ತಿಗೆ ಅಧ್ಯಕ್ಷೆ ಮತ್ತು ಸದಸ್ಯರು ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರ್ಲಕೊಂಡ ಗ್ರಾಮಪಂಚಾಯತಿ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ್, ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅಧ್ಯಕ್ಷರು, ಸದಸ್ಯರ ಮಾತಿಗೆ ಕಿಮ್ಮತ್ತು ಕೊಡಲ್ಲ ಅಂತ ಆಕ್ರೋಶಗೊಂಡ ಆಧ್ಯಕ್ಷೆ ಆನಂದಮ್ಮ ಹಾಗೂ ಸದಸ್ಯರು ಇಂದು ಪಿಡಿಈ ರನ್ನ ಹೊರ ಹಾಕಿ ಕಚೇರಿಗೆ ಬೀಗ ಜಡಿದಿದ್ದಾರೆ.ಶ್ರೀನಿವಾಸ್ ಅವರನ್ನ ಬದಲಾವಣೆ ಮಾಡುವಂತೆ ಜಿಲ್ಲಾ ಪಂಚಾಯತ್ ಸಿಇಓ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಎಂ ಯಾವುದೇ ವಿವಾದ ಸೃಷ್ಟಿಸಿಕೊಳ್ಳದೇ ರಾಜ್ಯ ಮುನ್ನಡೆಸಲಿದ್ದಾರೆ: ಕೋಡಿಮಠ ಶ್ರೀ ಭವಿಷ್ಯSign in to your account
Username or Email Address


Password

 Remember Me


