ಬೆಂಗಳೂರು: ಕೊರೊನಾ ಮಹಾಮಾರಿಯ ಸಂಖ್ಯೆ ಏರಿಳಿತವಾಗಿದ್ದು, ಇಂದು ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 1,217 ಜನಕ್ಕೆ ಸೋಂಕು ತಗುಲಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.ಸದ್ಯ ರಾಜ್ಯದಲ್ಲಿ 18,386 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,198 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.94 ಮತ್ತು ಮರಣ ಪ್ರಮಾಣ ಶೇ.2.05ರಷ್ಟಿದೆ. ಇದುವರೆಗೂ 29,49,445 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 37,319ಕ್ಕೆ ಏರಿಕೆಯಾಗಿದೆ. ಇಂದು 1,28,657 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.ರಾಜಧಾನಿಯಲ್ಲಿಂದು 287 ಹೊಸ ಪ್ರಕರಣಗಳು ವರದಿಯಾಗಿದ್ದು, ಏಳು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ 7,438 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಹೊರತುಪಡಿಸಿ ದಕ್ಷಿಣ ಕನ್ನಡ, ಮೈಸೂರು, ಉಡುಪಿಯಲ್ಲಿ ಮಹಾಮಾರಿಯ ಅಬ್ಬರ ಹೆಚ್ಚಾಗಿದೆ. ಇನ್ನೂ ಬಾಗಲಕೋಟೆ, ಬಳ್ಳಾರಿ, ಬೀದರ್ ಮತ್ತು ರಾಯಚೂರಿನಲ್ಲಿ ಶೂನ್ಯ ಪ್ರಕರಣ ದಾಖಲಾಗಿವೆ.ಯಾವ ಜಿಲ್ಲೆಯಲ್ಲಿ ಎಷ್ಟು?: 
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು ನಗರ 287, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 8, ದಕ್ಷಿಣ ಕನ್ನಡ 224, ದಾವಣಗೆರೆ 10, ಧಾರವಾಡ 9, ಗದಗ 1, ಹಾಸನ 56, ಹಾವೇರಿ 1, ಕಲಬುರಗಿ 3, ಕೊಡಗು 89, ಕೋಲಾರ 55, ಕೊಪ್ಪಳ 1, ಮಂಡ್ಯ 11, ಮೈಸೂರು 127, ರಾಯಚೂರು 0, ರಾಮನಗರ 36, ಶಿವಮೊಗ್ಗ 30, ತುಮಕೂರು 30, ಉಡುಪಿ 150, ಉತ್ತರ ಕನ್ನಡ 41, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.  ಇದನ್ನೂ ಓದಿ: ಗೋವಾದಲ್ಲಿ ಮೊದಲ ಡೆಲ್ಟಾ ಪ್ಲಸ್ ಸೋಂಕು ಪತ್ತೆSign in to your account
Username or Email Address


Password

 Remember Me


