ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 29-26
ಶಿವಮೊಗ್ಗ: 31-23
ಬೆಳಗಾವಿ: 33-23
ಮೈಸೂರು: 32-22ಮಂಡ್ಯ: 33-23
ಮಡಿಕೇರಿ: 24-28
ರಾಮನಗರ: 33-23
ಹಾಸನ: 29-21
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 34-23ಕೋಲಾರ: 34-24
ತುಮಕೂರು: 33-23
ಉಡುಪಿ: 29-26
ಕಾರವಾರ: 32-27
ಚಿಕ್ಕಮಗಳೂರು: 28-21
ದಾವಣಗೆರೆ: 35-24ಹುಬ್ಬಳ್ಳಿ: 34-23
ಚಿತ್ರದುರ್ಗ: 34-23
ಹಾವೇರಿ: 34-24
ಬಳ್ಳಾರಿ: 29-26
ಗದಗ: 36-24
ಕೊಪ್ಪಳ: 37-25ರಾಯಚೂರು: 40-28
ಯಾದಗಿರಿ: 40-28
ವಿಜಯಪುರ: 39-25
ಬೀದರ್: 39-27
ಕಲಬುರಗಿ: 40-28
ಬಾಗಲಕೋಟೆ: 32-22Sign in to your account
Username or Email Address


Password

 Remember Me


