ಬೆಂಗಳೂರು: ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 7 ಮಂದಿ ಮೃತಪಟ್ಟಿದ್ದಾರೆ.ಫುಟ್ ಪಾತ್ ಮೇಲಿದ್ದ ವಿದ್ಯುತ್ ಕಂಬಕ್ಕೆ ಆಡಿ ಕ್ಯೂ 3 ಕಾರು ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ಕು ಪುರುಷರು, ಮೂವರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.ರಾತ್ರಿ 1:30ರ ಸುಮಾರಿಗೆ ಈ ಘಟನೆ ನಡೆದಿದ್ದು ಕರುಣಾಸಾಗರ, ಬಿಂದು, ಇಶಿತಾ, ಡಾ.ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಮೃತಪಟ್ಟಿದ್ದಾರೆ. ಮೃತರೆಲ್ಲರೂ 20-30ರ ವಯೋಮಾನದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್ ಕೇಳಿದಕ್ಕೆ ಕಲೆಕ್ಟರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ತಂದೆ ಮಗಅಕ್ಷಯ್ ಗೋಯಲ್ ಕೇರಳ, ಉತ್ಸವ್ ಹರ್ಯಾಣ, ರೋಹಿತ್ ಹುಬ್ಬಳ್ಳಿ, ಕರುಣಾ ಸಾಗರ್ ಹೊಸೂರು ಮೂಲದವರಾಗಿದ್ದಾರೆ. ಕರುಣಾಸಾಗರ, ಬಿಂದು ದಂಪತಿಯಾಗಿದ್ದರು. ಕಾರಿನ ಮುಂಬದಿ ಸೀಟಿನಲ್ಲಿ ಮೂವರು ಕುಳಿತಿದ್ದರೆ ಹಿಂಬದಿ ನಾಲ್ವರು ಕುಳಿತಿದ್ದರು. ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.  ಇದನ್ನೂ ಓದಿ : ಯುವತಿಗೆ ಮದುವೆ ನಿಶ್ಚಯ- ಕತ್ತು ಕೊಯ್ದ ಪಾಗಲ್ ಪ್ರೇಮಿ ಅಪಘಾತಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ವೇಗದ ಚಾಲನೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಮದ್ಯ ಸೇವಿಸಿ ಚಾಲನೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.Sign in to your account
Username or Email Address


Password

 Remember Me


