ಬೆಂಗಳೂರು: 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯುವುದೇ ನಮ್ಮ ಗುರಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳ ಪ್ರವಾಸಕ್ಕೆ ಅರುಣ್ ಸಿಂಗ್ ಇಂದು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯುವುದೇ ರಾಜ್ಯದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಗುರಿಯಾಗಿದೆ ಎಂದು ಹೇಳಿದ್ದಾರೆ.ಮೊದಲಿಗೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಹಾಸನ ಭಾಗದಲ್ಲಿ ಪ್ರವಾಸ ಮಾಡಲಿದ್ದೇನೆ. ಪಕ್ಷ ಬಲವರ್ಧನೆಗಾಗಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಮುಂದಿನ 2023ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವುದೇ ನಮ್ಮ ಗುರಿ. ಉಳಿದ ಸಚಿವ ಸ್ಥಾನಗಳ ಹಂಚಿಕೆ ಸಿಎಂಗೆ ಬಿಟ್ಟ ನಿರ್ಧಾರವಾಗಿದೆ. ಹೈಕಮಾಂಡ್ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆಗಳನ್ನು ಪಡೆದು ಸಚಿವ ಸ್ಥಾನ ಹಂಚಿಕೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ವಿಕ್ರಾಂತ್ ರೋಣ ನಟಿಗೆ ಇಡಿ ವಿಚಾರಣೆವಿಮಾನ ನಿಲ್ದಾಣ  ದಿಂದ ನೇರವಾಗಿ ಮೈಸೂರಿನತ್ತ ಪ್ರಯಾಣ ಬೆಳೆಸಿದರು. ಅರುಣ್ ಸಿಂಗ್‍ರನ್ನ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಸಿದ್ದರಾಜು ಬರ ಮಾಡಿಕೊಂಡರು.Sign in to your account
Username or Email Address


Password

 Remember Me


