ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.ಕೆಲವು ದಿನಗಳಿಂದ ಮನೆಯಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನವೇಶ್ಯವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾದ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಸದ್ಯ ಬಂಧಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


