ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೂರ್ಮ ರಾವ್ ಎಂ. ಅವರನ್ನು ಉಡುಪಿಯ ನೂತನ ಡಿಸಿಯಾಗಿ ನೇಮಿಸಲಾಗಿದೆ.ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ. ಇದನ್ನೂ ಓದಿ: ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್.ಎಂ ಅವರನ್ನು ತಕ್ಷಣದಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ. ಜಿ.ಜಗದೀಶ್ ಉಡುಪಿಯಲ್ಲಿ ಎರಡು ವರ್ಷಗಳಕಾಲ ಸೇವೆ ಮಾಡಿದ್ದರು.Sign in to your account
Username or Email Address


Password

 Remember Me


