ವಿಜಯಪುರ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ನೇಗಿನಾಳ ಗ್ರಾಮದಲ್ಲಿ ನಡೆದಿದೆ.ಮಂಜುನಾಥ್ ಸಿದ್ದನಗೌಡ ಪಾಟೀಲ್(25) ಮೃತ ದುರ್ದೈವಿ. ಬಸವನ ಬಾಗೇವಾಡಿ ತಾಲೂಕಿನ ನೇಗಿನಾಳ ಮುಳ್ಳಾಳ ಹಳ್ಳದ ಬಳಿ ಕಳೆದ ಶುಕ್ರವಾರ ರಾತ್ರಿ ಮಂಜುನಾಥ್ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯುವಕನಿಗಾಗಿ ಹುಡುಕಾಟ ಮಾಡುತ್ತಿದ್ದು, ಇಂದು ಡೋಣಿ ನದಿಯಲ್ಲಿ ಶವ ಪತ್ತೆಯಾಗಿದೆ.ಇದನ್ನೂ ಓದಿ:ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್ನೇಗಿನಾಳ ಮುಳ್ಳಾಳ ಹಳ್ಳದಿಂದ 100 ಮೀಟರ್ ದೂರದಲ್ಲಿ ಡೋಣಿ ನದಿಯಿದ್ದು, ಮಂಜುನಾಥ್ ಶವ ಪತ್ತೆಯಾಗಿದೆ. ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಶವ ಪತ್ತೆ ಮಾಡಲಾಗಿದೆ. ಮನಗೂಳಿ ಪೆÇಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ:ಸರ್ಕಾರದಿಂದ ಆದೇಶ ಹೊರಡಿಸಿ ಪುಣ್ಯ ಕಟ್ಟಿಕೊಳ್ಳಿ- ಮಾಜಿ ಸ್ಪೀಕರ್ ವಿರುದ್ಧ ಪೊಲೀಸರ ಆಕ್ರೋಶSign in to your account
Username or Email Address


Password

 Remember Me


