ಮಂಗಳೂರು: ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅಧಿಕಾರಿಗಳಿಗೆ ಸೂಚಿಸಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣ ಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮ ಲೆಕ್ಕಿಗರಿಗೆ ನೀಡಲು ಸೂಚನೆ ನೀಡಿದರು. ಅವರಿಂದ ಪಡಿತರ ಚೀಟಿದಾರರ ಆದಾಯ ದೃಢೀಕರಣ ಪತ್ರವನ್ನು ಪರಿಷ್ಕರಿಸಿ ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


