ಮೈಸೂರು: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಓರ್ವ ಆರೋಪಿ 6 ತಿಂಗಳ ತಿಂಗಳ ಹಿಂದೆಯಷ್ಟೇ ಪೊಲೀಸರ ಅತಿಥಿಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.ಶ್ರೀಗಂಧದ ಮರಕದ್ದ ಪ್ರಕರಣದಲ್ಲಿ ಮೈಸೂರಿನ ನಜರ್ ಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಸುಮಾರು 5 ಲಕ್ಷ ಮೌಲ್ಯದ ಶ್ರೀಗಂಧ ಹಾಗೂ ಕಾರುಗಳನ್ನು ಈ ವೇಳೆ ವಶಕ್ಕೆ ಪಡೆಯಲಾಗಿತ್ತು. ಈತನ ಮೇಲೆ 10 ಪ್ರಕರಣಗಳು ಇರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಯಾವುದೇ ರಾಜ್ಯಕ್ಕೆ ಹೋದರೂ ಒಂದೇ ವಾಹನ ನಂಬರ್ – ಈಗಿನ ವ್ಯವಸ್ಥೆ ಹೇಗಿದೆ? ಯಾರಿಗೆ ಸಿಗಲಿದೆ?
ಜನವರಿ 9 ರಂದು ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿತ್ತು. ನ್ಯಾಯಾಂಗ ಬಂಧನದ ಬಳಿಕ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿಗೆ ಹೋಗಿದ್ದರೂ ಬುದ್ಧಿ ಕಲಿಯದ ಈತ ಈಗ ಸಾಮೂಹಿಕ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್ಪೊಲೀಸರು ಆರೋಪಿಗಳನ್ನು ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇಂದಿನಿಂದ ತಮ್ಮ ಕಸ್ಟಡಿಯಲ್ಲಿ ಡ್ರಿಲ್ ಮಾಡಲಿರುವ ಪೊಲೀಸರು ಕಾಮುಕರಿಂದ ಮತ್ತಷ್ಟು ಮಾಹಿತಿ ಕಲೆ ಹಾಕುವ ವಿಶ್ವಾಸದಲ್ಲಿದ್ದಾರೆ.Sign in to your account
Username or Email Address


Password

 Remember Me


