ಬೆಂಗಳೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಕ್ಷಣವೇ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಟ ಜಗ್ಗೇಶ್ ಬಹುಮಾನ ಘೋಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚೆಕ್ ನೀಡಿದ್ದಾರೆ.ಪತ್ನಿ ಸಮೇತರಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ನಟ ಜಗ್ಗೇಶ್, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ವೈಯಕ್ತಿಕವಾಗಿ 1 ಲಕ್ಷ ರೂ.ಗಳ ಚೆಕ್ ನೀಡಿದ್ದಾರೆ.ಕಾಲೇಜು ವಿಧ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು.
Am proud of my state police..
ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ನಲ್ಮೆಯ ನನ್ನ ಪೋಲಿಸರಿಗೆ 1ಲಕ್ಷ ಬಹುಮಾನ!
ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ!ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್????❤— ನವರಸನಾಯಕ ಜಗ್ಗೇಶ್ (@Jaggesh2) August 28, 2021ಪರಿಹಾರ ಘೋಷಿಸಿ ಟ್ವೀಟ್ ಮಾಡಿದ್ದ ಜಗ್ಗೇಶ್, ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮ ಪಿಪಾಸುಗಳನ್ನು ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ವೈಯಕ್ತಿಕ ಅಭಿನಂದನೆಗಳು. ಐ ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್, ಪ್ರಕರಣ ಬೇಧಿಸಿದ ನಲ್ಮೆಯ ಪೋಲಿಸರಿಗೆ ನನ್ನ ಕಡೆಯಿಂದ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ, ರಾಷ್ಟ್ರಕ್ಕೆ ಮಾದರಿ ನಮ್ಮ ಪೋಲಿಸ್ ಎಂದು ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್ಪ್ರಕರಣದ ಬಗ್ಗೆ ಈ ಹಿಂದೆ ಸಹ ಆಕ್ರೋಶ ವ್ಯಕ್ತಪಡಿಸಿದ್ದ ಜಗ್ಗೇಶ್, ಎಂಥ ಕ್ರೂರಿಗಳು, ತಾಯಿ ಹೆಣ್ಣಲ್ಲವೆ? ಅಕ್ಕ, ತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು, ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ತನಿಖೆ ನಡೆಸಿ ಆರೋಪಿಗಳ ಹಡೆಮುರಿ ಕಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸ್ಥಳದಲ್ಲಿ ಸಿಕ್ಕ ಬಿಯರ್ ಬಾಟ್ಲಿ, ತಳವಾಡಿಯ ಬಸ್ ಟಿಕೆಟ್ ಮತ್ತು ಯುವಕನ ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದರು. ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರು, ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.Sign in to your account
Username or Email Address


Password

 Remember Me


