ಬೆಂಗಳೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್‍ರವರ ಮುದ್ದಿನ ಮಗ ವಿಹಾನ್ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.ನಟ ದುನಿಯಾ ವಿಜಯ್, ಬುಲೆಟ್ ಪ್ರಕಾಶ್ ಸೇರಿದಂತೆ ಹಲವಾರು ನಟರ ಪುತ್ರರು ಈಗಾಗಲೇ ಸ್ಯಾಂಡಲ್‍ವುಡ್‍ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಈ ನಡುವೆ ಇದೀಗ ಈ ಸಾಲಿಗೆ ಗಣೇಶ್ ಪುತ್ರ ವಿಹಾನ್ ಕೂಡ ಸೇರ್ಪಡೆಯಾಗುತ್ತಿದ್ದಾರೆ. ಗಣೇಶ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಖತ್ ಸಿನಿಮಾದಲ್ಲಿ ಗಣೇಶ್‍ರವರ ಚಿಕ್ಕ ವಯಸ್ಸಿನ ಪಾತ್ರದಲ್ಲಿ ವಿಹಾನ್ ಅಭಿನಯಿಸುತ್ತಿದ್ದಾರೆ. ಅಲ್ಲದೇ ಗಾಳಿಪಟ-2 ಸಿನಿಮಾದಲ್ಲಿಯೂ ವಿಹಾನ್ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಸದ್ಯ ಶುಕ್ರವಾರ ವಿಹಾನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿರುವ ಗಣೇಶ್, ಮಗನ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಸಖತ್ ಸಿನಿಮಾದ ಪೋಸ್ಟರ್‍ವೊಂದನ್ನು ಶೇರ್ ಮಾಡಿದ್ದಾರೆ. ಜೊತೆಗೆ, ಮೊಳಕೆಯ ಬೆಳೆಯುವ ಸಿರಿಯನು ತೆರೆಯ ಮೇಲೆ ನೀವೇ ನೋಡಿ ಹರಸಿ ಹಾರೈಸಿ ಆಶೀರ್ವದಿಸಿ. ಜ್ಯೂನಿಯರ್ ವಿಹಾನ್ ಗಣೇಶ್ ಸಖತ್ ಸಿನಿಮಾದಲ್ಲಿ ಬಾಲು ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಮಗನೇ ಎಂದು ಕ್ಯಾಪ್ಷನ್‍ನಲ್ಲಿ ಬರೆಯುವ ಮೂಲಕ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದಂದು ‘ಸಖತ್’ ಲುಕ್‍ನಲ್ಲಿ ಮಿಂಚಿದ ಗಣೇಶ್  A post shared by Ganesh (@goldenstar_ganesh)ಈ ಮುನ್ನ ಗಣೇಶ್ ಹಾಗೂ ನಟಿ ರಶ್ಮಿಕಾ ನಟಿಸಿದ್ದ ಚಮಕ್ ಸಿನಿಮಾದಲ್ಲಿ ಮಗಳು ಚಾರಿತ್ರ್ಯರನ್ನು ಗಣೇಶ್ ಪರಿಚಯ ಮಾಡಿಕೊಟ್ಟಿದ್ದರು. ಇದೀಗ ವಿಹಾನ್ ಇದೇ ಮೊದಲ ಬಾರಿಗೆ ಅಪ್ಪನ ಚಿತ್ರಕ್ಕಾಗಿ ಬಣ್ಣಹಚ್ಚಲಿದ್ದಾರೆ. ಇದನ್ನೂ ಓದಿ:ಆಮ್ಲೆಟ್ ಮಾಡೋ ವಿಧಾನ ಹೇಳಿಕೊಟ್ಟ ಗಣೇಶ್ ಮಗಳ ವೀಡಿಯೋ ವೈರಲ್  A post shared by Ganesh (@goldenstar_ganesh)Sign in to your account
Username or Email Address


Password

 Remember Me


