ಹಾವೇರಿ: ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಮಧ್ಯಾಹ್ನ ಶವವಾಗಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ.ಹಾವೇರಿ ಜಿಲ್ಲೆಯ ಕವಿತಾ ಹುಬ್ಬಳ್ಳಿ(20) ವಿದ್ಯಾರ್ಥಿನಿ ಆಗಸ್ಟ್ 23ರಂದು ಕಾಲೇಜಿಗೆ ಹೋಗಿದ್ದಾರೆ. ಆದರೆ ಅದೇ ದಿನ ಮಧ್ಯಾಹ್ನದ ವೇಳೆಗೆ ಅನುಮಾನಾಸ್ಪದವಾಗಿ ಗಂಗಿಬಾವಿ ರಸ್ತೆ ಪಕ್ಕದ ಹೊಂಡದಲ್ಲಿ ಕವಿತಾ ಮೃತದೇಹ ಪತ್ತೆಯಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿಈ ಸಾವು ಏಕೆ? ಹೇಗೆ? ಆಗಿದೆ ಎಂಬುದನ್ನು ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರಕವಿತಾ ಶಿಗ್ಗಾಂವಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರು.






 Advertisement 




Sign in to your account
Username or Email Address


Password

 Remember Me


