ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕೌಂಟ್‍ಡೌನ್ ಸ್ಟಾರ್ಟ್ ಆಗಿದೆ. ಈಗಾಗಲೇ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಪ್ರಾರಂಭಿಸಿದ್ದಾರೆ. ಆದರೆ ಈ ಮಧ್ಯೆ ಸುದೀಪ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.ಪ್ರತಿ ವರ್ಷ ಸೆಪ್ಟೆಂಬರ್ 2 ಬಂತು ಎಂದರೆ ಕಿಚ್ಚನ ಅಭಿಮಾನಿಗಳಿಗೆ ಒಂದು ರೀತಿ ಹಬ್ಬದ ವಾತಾವರಣ. ಸುದೀಪ್ ಹುಟ್ಟುಹಬ್ಬದ ಹಿಂದಿನ ದಿನವೇ ಸಾವಿರಾರು ಮಂದಿ ಹೂವಿನ ಹಾರ, ಕೇಕ್, ಬ್ಯಾನರ್‌ಗಳನ್ನು ಹಿಡಿದುಕೊಂಡು ಕಿಚ್ಚನ ಮನೆಯ ಮುಂದೆ ಜಮಾಯಿಸಿ ಬಿಡುತ್ತಾರೆ. ಸದ್ಯ ಸ್ಯಾಂಡಲ್‍ವುಡ್ ಅಷ್ಟೇ ಅಲ್ಲದೇ ಬೇರೆ ಭಾಷೆಯಲ್ಲಿಯೂ ಮಿಂಚುತ್ತಿರುವ ಸುದೀಪ್ ಇದೀಗ ಸಾಕಷ್ಟು ಅಭಿಮಾನಿ ಬಳಗ ಹೊಂದಿದ್ದಾರೆ. ಇದನ್ನೂ ಓದಿ:ಗೆಳೆಯ… ಹಾಡು ಪ್ಲೇ – ಸುದೀಪ್ ಜೊತೆ ಬೇಸರ ತೋಡಿಕೊಂಡ ದಿವ್ಯಾಪ್ರತಿ ವರ್ಷದಂತೆ ಈ ಬಾರಿಯೂ ಕಿಚ್ಚನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಅಭಿಮಾನಿಗಳಿಗೆ ಕಿಚ್ಚ ಇದೀಗ ಸಂದೇಶವನ್ನು ರವಾನಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇದನ್ನೂ ಓದಿ:ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಸುದೀಪ್ – ಕಿಚ್ಚನ ಟ್ರೆಡಿಷನಲ್ ಲುಕ್‍ಗೆ ಫ್ಯಾನ್ಸ್ ಫಿದಾನನ್ನೆಲ್ಲಾ, ಪ್ರೀತಿಯ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ವರ್ಷವೂ ನಾನು ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ ಎಂದು ಕೋರುತ್ತೇನೆ ಎಂದು ಸೋಶಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.






 Advertisement 




Sign in to your account
Username or Email Address


Password

 Remember Me


