ಬೆಂಗಳೂರು: ರಾಜ್ಯದಲ್ಲಿ ಇಂದು 1,301 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,614 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.69ರಷ್ಟಿದೆ. ಮರಣ ಪ್ರಮಾಣ ಶೇ.1.30ಕ್ಕೆ ತಲುಪಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,44,764 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 37,248 ಜನ ಸಾವನ್ನಪ್ಪಿದ್ದಾರೆ. 28,88,520 ಜನ ಈವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿಒಟ್ಟು 1,86,900 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,52,819 + 34,081 ರ್ಯಾಪಿಡ್ ಆ್ಯಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 386 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 7,341 ಸಕ್ರಿಯ ಪ್ರಕರಣಗಳಿವೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 386, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 248, ದಾವಣಗೆರೆ 14, ಧಾರವಾಡ 6, ಗದಗ 1, ಹಾಸನ 117, ಹಾವೇರಿ 4, ಕಲಬುರಗಿ 7, ಕೊಡಗು 78, ಕೋಲಾರ 14, ಕೊಪ್ಪಳ 1, ಮಂಡ್ಯ 26, ಮೈಸೂರು 72, ರಾಯಚೂರು 0, ರಾಮನಗರ 3, ಶಿವಮೊಗ್ಗ 62, ತುಮಕೂರು 37, ಉಡುಪಿ 106, ಉತ್ತರ ಕನ್ನಡ 38, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.Sign in to your account
Username or Email Address


Password

 Remember Me


