ಮೈಸೂರು: ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮೈಸೂರು ವಿವಿ ಹೊರಡಿಸಿರುವ ಆದೇಶ ವಿವಾದಕ್ಕೀಡಾಗಿದೆ.ಸಂಜೆ 6:30ರ ನಂತರ ಮಾನಸಗಂಗೋತ್ರಿ ಆವರಣ, ಕುಕ್ಕರಹಳ್ಳಿಕೆರೆ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ನಿರ್ಬಂಧ ಹೇರಿ ವಿವಿ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.ಸಂಜೆ 6:30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ. ಸುರಕ್ಷತೆ, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್ ಭದ್ರತಾ ಸಿಬ್ಬಂದಿ ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲೂ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಿದ್ದೇವೆ ಎಂದು ವಿವಿ ಹೇಳಿದೆ.ಈ ಬಗ್ಗೆ, ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್, ಒಂಟಿಯಾಗಿ ಹೆಣ್ಣುಮಕ್ಕಳು ತಿರುಗಬಾರದು ಅಂತ ಎಚ್ಚರಿಕೆ ವಹಿಸಿದ್ದೇವೆ. ಜೊತೆಗೆ, ಪೊಲೀಸ್ ಇಲಾಖೆಯಿಂದ ಮೌಖಿಕವಾಗಿ ಆದೇಶ ಬಂದಿದೆ. ಹಾಗಾಗಿ, ಕ್ರಮ ತೆಗೆದುಕೊಂಡಿದ್ದೇವೆ. ಆದೇಶವನ್ನು ಪುನರ್ ವಿಮರ್ಶೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪSign in to your account
Username or Email Address


Password

 Remember Me


