ಯಾದಗಿರಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದ ಬಳಿ ನಡೆದಿದೆ.ಗುರುಮಠಕಲ್ ನಲ್ಲಿ ಶಾಲೆ ಮುಗಿಸಿ ಬೂದೂರು ಗ್ರಾಮಕ್ಕೆ ಬೊಲೆರೋ ವಾಹನದಲ್ಲಿ 15 ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಘಟನೆ ವೇಳೆ ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, 9 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಮಕ್ಕಳನ್ನು ರಾಯಚೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.  ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಪರಿಚಯ – ಯುವತಿಗೆ ಲಕ್ಷಾಂತರ ರೂ. ವಂಚಿಸಿದ್ದ ವಂಚಕ ಅಂದರ್ಇನ್ನೂಳಿದ ವಿದ್ಯಾರ್ಥಿಗಳು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಗುರುಮಠಕಲ್ ಸಿಪಿಐ ಖಾಜಾ ಹುಸೇನ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸ್ನಾನಕ್ಕೆಂದು ಬಾತ್‍ರೂಮಿಗೆ ಹೋದ ಮಹಿಳೆಯ ಅನುಮಾನಾಸ್ಪದ ಸಾವು






 Advertisement 




Sign in to your account
Username or Email Address


Password

 Remember Me


