ಮಂಡ್ಯ: ಅಧಿಕಾರಕ್ಕೋಸ್ಕರ ಹೊಡೆದಾಡುವುದನ್ನು ಬಿಟ್ಟು ಆಡಳಿತದ ಕಡೆ ಗಮನಹರಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.ಸುತ್ತೂರಿನಲ್ಲಿ ನಂಜನಗೂಡು, ಚಾಮರಾಜನಗರ, ಯಳಂದೂರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಂತಹ ನಗರದಲ್ಲೇ ಇಂತಹ ಘಟನೆ ನಡೆದಿರುವುದು ಕಳವಳಕಾರಿ ವಿಷಯ. ಇನ್ನು ಬೇರೆ ನಗರಗಳ ಗತಿ ಏನು ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಯುವಕರ ಗುಂಪುಗಳ ನಡುವೆ ಮಾರಾಮಾರಿ- ವೀಡಿಯೋ ಸಿಸಿಟಿವಿಯಲ್ಲಿ ಸೆರೆಇದೇ ವೇಳೆ ಸರ್ಕಾರ ರಾಜಕೀಯ ಮಾಡುವುದನ್ನು ಬಿಟ್ಟು, ಅಧಿಕಾರಕ್ಕೋಸ್ಕರ ಹೊಡೆದಾಡುವುದನ್ನು ಬಿಟ್ಟು, ಇನ್ನಾದರು ಆಡಳಿತದ ಕಡೆ ಗಮನ ಗಮನಹರಿಸಲಿ. 48 ಗಂಟೆಗಳಾದರೂ ಆರೋಪಿಗಳು ಪತ್ತೆಯಾಗದಿರುವುದು ಪೊಲೀಸ್‍ಗೆ ಹಿನ್ನಡೆ ಎಂದು ವಾಗ್ದಾಳಿ ನಡೆಸಿದ್ದಾರೆ.ವಿದ್ಯಾರ್ಥಿನಿ ಆ ಸಮಯದಲ್ಲಿ ಅಲ್ಲಿಗೇಕೆ ಹೋಗಬೇಕಿತ್ತು ಎಂಬ ಗೃಹ ಸಚಿವರ ಹೇಳಿಕೆ ವಿಚಾರ, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಇಂತಹ ಹೇಳಿಕೆ ನೀಡುವುದು ತಪ್ಪು. ಹೆಣ್ಣು ಮಕ್ಕಳು ಎಲ್ಲಿಗೆ ಹೋಗಲಿ ಅವರಿಗೆ ರಕ್ಷಣೆ ಕೊಡಬೇಕಾದ್ದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ






 Advertisement 




Sign in to your account
Username or Email Address


Password

 Remember Me


